ಈ ಬಾರಿಯ ಬಜೆಟ್ನಲ್ಲಿ ಸಹಕಾರ ಕ್ಷೇತ್ರದ ಬಲವರ್ಧನೆಗೆ ಕೆಲವು ಅಂಶಗಳನ್ನು ಪ್ರಕಟಿಸಿರುವುದು ಸ್ವಾಗತಾರ್ಹ. 10 ಕೋಟಿ ರೂ. ಒಳಗಿನ ಆದಾಯ ಹೊಂದಿರುವ ಸಹಕಾರ ಸಂಘಗಳ ಮೇಲಿನ ಸರ್ಚಾರ್ಜ್ ಅನ್ನು ಶೇ.12ರಿಂದ ಶೇ.7ಕ್ಕೆ ಇಳಿಸಿರುವುದು ಸಹಕಾರ ಕ್ಷೇತ್ರದ ಬಲವರ್ಧನೆಗೆ ಪೂರಕವಾಗಲಿದೆ. ಈ ತನಕ ಸಹಕಾರ ಸಂಘಗಳು ಪಾವತಿಸುತ್ತಿದ್ದ ಪರ್ಯಾಯ ಕನಿಷ್ಠ ತೆರಿಗೆ ಮಿತಿಯನ್ನು ಶೇ.18.5ರಿಂದ ಶೇ.15ಕ್ಕೆ ಇಳಿಸಲಾಗಿದೆ. ಕಳೆದ ವರ್ಷ ಹೊಸದಾಗಿ ಆರಂಭವಾಗಿರುವ ಸಹಕಾರ ಸಚಿವಾಲಯಕ್ಕೆ 900 ಕೋಟಿ ರೂ. ನೀಡಿರುವುದು ಈ ಕ್ಷೇತ್ರಕ್ಕೆ ಸಹಕಾರಿಯಾಗಲಿದೆ. ಒಟ್ಟಾರೆಯಾಗಿ ಸಹಕಾರ ಕ್ಷೇತ್ರದ ಸಮಗ್ರ ಅಭಿವೃದ್ಧಿಯ ದೃಷ್ಟಿಕೋನದಿಂದ ಕೂಡಿದ ಸಕಾರಾತ್ಮಕ ಬಜೆಟ್.
ಡಾ. ಎಸ್ ಆರ್ ಹರೀಶ್ ಆಚಾರ್ಯ
ಅಧ್ಯಕ್ಷರು, ಸಹಕಾರ ಅಧ್ಯಯನ ಮತ್ತು ಅಭಿವೃದ್ಧಿ ಸಂಸ್ಥೆ, ಮಂಗಳೂರು